ಚಿತ್ತಾಪುರ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಅಧ್ಯಕ್ಷತೆಯಲ್ಲಿ ಮಾ.28 ರಂದು ಸಾಯಾಂಕಾಲ 5 ಗಂಟೆಗೆ ಕಾರ್ಯಕರ್ತರ ಸಭೆ ಹಮ್ಮಿಕೊಳ್ಳಲಾಯಿತು.
ನಂತರ ಮಾತನಾಡಿದ ಅವರು, ವಿಧಾನ ಸಭೆಯಲ್ಲಿ ನಾನಿದ್ದೇನೆ. ರಾಜ್ಯಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು, ಇನ್ನೂ ಲೋಕಸಭೆ ಮಾತ್ರ ಖಾಲಿ ಇದೆ. ರಾಧಾಕೃಷ್ಣ ಅವರನ್ನು ನೀವು ಆರಿಸಿ ಕಳುಹಿಸಿದರೆ ಟ್ರೀಪಲ್ ಅಭಿವೃದ್ಧಿಯಾಗಾಲಿದೆ ಎಂದರು.ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಅನೇಕ ಮುಖಂಡರು ಹಾಗೂ ಕಾರ್ಯಕರ್ತರು ಇದ್ದರು.