Google search engine
ಮನೆಕಲ್ಯಾಣ ಕರ್ನಾಟಕಕ್ಷೇತ್ರದ ಸಮಗ್ರ ಅಭಿವೃದ್ದಿಗೆ ನನ್ನನ್ನು ಗೆಲ್ಲಿಸಿ; ರಾಧಾಕೃಷ್ಣ ದೊಡ್ಡಮನಿ

ಕ್ಷೇತ್ರದ ಸಮಗ್ರ ಅಭಿವೃದ್ದಿಗೆ ನನ್ನನ್ನು ಗೆಲ್ಲಿಸಿ; ರಾಧಾಕೃಷ್ಣ ದೊಡ್ಡಮನಿ

ಪಕ್ಷವನ್ನು ಕೇಂದ್ರದಲ್ಲಿ ಅಧಿಕಾರಕ್ಕೆ ತರಬೇಕು.

ಕಲಬುರಗಿ: ಕ್ಷೇತ್ರದ ಸಮಗ್ರ ಅಭಿವೃದ್ದಿಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ನನ್ನನ್ನು ಗೆಲ್ಲಿಸಿ ಎಂದು ರಾಧಾಕೃಷ್ಣ ದೊಡ್ಡಮನಿ ಅವರು ಮತದಾರರಲ್ಲಿ ಮನವಿ ಮಾಡಿದರು.

ಪುಟ್ ಪಾಕ್ ಗ್ರಾಮದಲ್ಲಿ ನಡೆದ ಸಭೆಯಲ್ಲಿ ಅವರು ಮಾತನಾಡುತ್ತಿದ್ದ ಅವರು ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿಗಳನ್ನು ಜಾರಿಗೊಳಿಸುವ ಮೂಲಕ ನುಡಿದಂತೆ ನಡೆದಿದೆ. ಜನಸಾಮಾನ್ಯರು ನೆಮ್ಮದಿಯಿಂದ ಜೀವನ ಮಾಡುತ್ತಿದ್ದಾರೆ ಎಂದ ಅವರು ಪಕ್ಷವನ್ನು ಕೇಂದ್ರದಲ್ಲಿ ಅಧಿಕಾರಕ್ಕೆ ತರಬೇಕು. ರಾಹುಲ್ ಗಾಂಧಿಯವರು ದೇಶದ ಜನರಿಗೆ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವ ಭರವಸೆ ನೀಡಿ ಎಂದರು.

ಮಾಜಿ ಸಚಿವ ಬಾಬುರಾವ ಚಿಂಚನಸೂರು ಮಾತನಾಡಿ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಈ ಭಾಗದ ಅಭಿವೃದ್ದಿಗೆ ಸಾವಿರಾರು ಕೋಟಿ ಅನುದಾನ ತಂದಿದ್ದಾರೆ. ಆರ್ಟಿಕಲ್ 371 ಜೆ ತಂದು ಕಲ್ಯಾಣ ಕರ್ನಾಟಕ ಪ್ರದೇಶದ ಪ್ರದೇಶದಲ್ಲಿ ಅಭಿವೃದ್ದಿಗೂ ಶ್ರಮಿಸಿದ್ದಾರೆ. ಅವರ ಅಳಿಯ ರಾಧಾಕೃಷ್ಣ ದೊಡ್ಡಮನಿ ಅವರು ಚುನಾವಣೆಗೆ ನಿಂತಿದ್ದಾರೆ. ನೀವೆಲ್ಲ ಆಶೀರ್ವಾದ ಮಾಡಿ ಎಂದು ಮನವಿ ಮಾಡಿದರು.

ವೇದಿಕೆಯ ಮೇಲೆ ಡಿಸಿಸಿ ಅಧ್ಯಕ್ಷ ಬಸರೆಡ್ಡಿ ಅನಪೂರ, ಮಾಜಿ‌ಎಂ ಎಲ್ ಸಿ ಶರಣಪ್ಪ ಮಟ್ಟೂರು, ಚಿದಾನಂದಪ್ಪ ಕಾಳಬೆಳಗುಂದಿ, ಶ್ರೇಣಿಕ್ ಕುಮಾರ ದೋಖಾ, ಶರಣಪ್ಪ ಮಾನೇಗಾರ್, ರವೀಂದ್ರರೆಡ್ಡಿ ಮಾಲೀಪಾಟೀಲ, ರಘುನಾಥರೆಡ್ಡಿ ನಜರಾಪುರ, ಬಸವರಾಜ ದಳಪತಿ, ಎಸ್ ಕೆ ಮೈನೂದ್ದೀನ್, ಚೆನ್ನಪ್ಪ ಗಾಜರಕೋಟ, ವೆಂಕಟೇಶ ಕರೆ, ದೇವರಾಜ್ ಹತ್ತಿಕುಣಿ, ಕೃಷ್ಣ ಚೆಪೆಟ್ಲಾ, ಸಿದ್ದಲಿಂಗರೆಡ್ಡಿ ಉಳ್ಳೆ ಸೂಗೂರು, ಸಂಜು ಚಂದಾಪುರ, ಅನಂದ್ ಬೋಯಿನ್ ಯದ್ಲಾಪುರ ಸೇರಿದಂತೆ ಹಲವರಿದ್ದರು

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

- Advertisment -
Google search engine

Most Popular

Recent Comments