ಬೀದರ್: ಸಾಲಭಾದೆಗೆ ಬೇಸತ್ತು ಬೀದರ್ ತಾಲೂಕಿನ ಸಿಟ್ಟ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದುಕೊಂಡು ಪ್ರಿನ್ಸ್ ಆಸ್ಪತ್ರೆಯ ವೈದ್ಯ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡಿರುವ ವೈದ್ಯನನ್ನು ಮಹಮ್ಮದ್ ಸೋಹೈಲ್ ಎಂದು ಗುರುತಿಸಲಾಗಿದೆ. ಅಧ್ಯಯನಕ್ಕಾಗಿ ವಿವಿಧ ಫೈನಾನ್ಸ್ ನಲ್ಲಿ ಲಕ್ಷಾಂತರ ರೂಪಾಯಿ ಸಾಲ ಮಾಡಿದ್ದರು ಎನ್ನಲಾಗಿದೆ. ಆದರೆ ಸಾಲ ತೀರಿಸಲಾಗದೆ ವೈದ್ಯ ಮಹಮ್ಮದ್ ಸುಹೇಲ್ ನೇಣು ಬಿಟ್ಟುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಅರಣ್ಯ ಪ್ರದೇಶದಲ್ಲಿ ಕೊಳೆತ ಸ್ಥಿತಿಯಲ್ಲಿ ವೈದ್ಯನ ಮೃತ ದೇಹ ಪತ್ತೆಯಾಗಿತ್ತು. ಪೊಲೀಸರು ತನಿಖೆ ನಡೆಸಿದಾಗ ವಿಚಾರ ಬೆಳಕಿಗೆ ಬಂದಿದೆ. ಗಾಂಧಿ ಗಂಜ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.