ಚಿಕ್ಕೋಡಿ: ಲೋಕಸಭೆ ಕ್ಷೇತ್ರದಲ್ಲಿ ಮತದಾರರಿಂದ ಉತ್ತಮ ಪ್ರತಿಕ್ರಿಯೆ ದೊರೆಯುತ್ತಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಹಾಗೂ ಯುವ ನಾಯಕಿ ಪ್ರೀಯಂಕಾ ಸತೀಶ ಜಾರಕಿಹೊಳಿ ಹೇಳಿದರು.
ಚಿಕ್ಕೋಡಿ ಎಂ.ಕೆ.ಕವಟಗಿಮಠ ನಗರದಲ್ಲಿ ಇರುವ ಜಾರಕಿಹೊಳಿ ನಿವಾಸದಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಯುವಕ- ಯುವತಿಯರು ರಾಜಕೀಯ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಹೆಚ್ಚಿನ ಪ್ರಾಧಾನ್ಯತೆ ನೀಡಿದ್ಸು. ಮತದಾರರಲ್ಲಿ ಅರ್ಧಕ್ಕಿಂತ ಹೆಚ್ಚು ಜನರು ಯುವಕರಿಂದ ದೇಶ ಕೂಡಿದೆ. ಯುವಕರಿಂದ ದೇಶದಲ್ಲಿ ಪ್ರಗತಿಯಾಗಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಪಕ್ಷ ನನಗೆ ಟಿಕೆಟ್ ನೀಡಿದೆ ಎಂದರು.
ತಂದೆ ಸತೀಶ ಜಾರಕಿಹೊಳಿ ಮಾಡಿರುವ ಅಭಿವೃದ್ಧಿ ಕಾರ್ಯಗಳಂತೆ ನಾನು ಚಿಕ್ಕೋಡಿ ಲೋಕಸಭೆ ಕ್ಷೇತ್ರದಲ್ಲಿ ಅಭಿವೃದ್ಧಿ ಮಾಡುವ ಗುರಿ ಇದೆ ಎಂದರು.
ಯುವಕರು ರಾಜಕೀಯ ಕ್ಷೇತ್ರದಲ್ಲಿ ಮುಂದೆ ಬರಬೇಕು ಮತ್ತು ಬದಲಾವಣೆ ದೃಷ್ಟಿಯಿಂದ ಯುವಕರನ್ನು ಆಯ್ಕೆ ಮಾಡಬೇಕು ಎಂದು ಪ್ರಿಯಾಂಕಾ ಜಾರಕಿಹೊಳಿ ಹೇಳಿದರು.
ಈ ಸಂದರ್ಭದಲ್ಲಿ ಯುವ ದುರೀಣ ರಾಹುಲ ಜಾರಕಿಹೊಳಿ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಮತ್ತು ಬುಡಾ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಹಾವೀರ ಮೋಹಿತೆ ಇದ್ದರು