ಕಲಬುರಗಿ: ಗಂಡು-ಹೆಣ್ಣು ಮಗುವಿನ ನಡುವೆ ತಾರತಮ್ಯ ಮಾಡಬಾರದು. ಭ್ರೂಣಲಿಂಗ ಪತ್ತೆ ಕಾನೂನಿನ ಪ್ರಕಾರ ಶಿಕ್ಷಾರ್ಹ ಅಪರಾಧವಾಗಿದೆ. ಭ್ರೂಣಹತ್ಯೆ ಮಾಡುವುದು ಅಮಾನವೀಯತೆಯಾಗಿದ್ದು, ಯಾರು ಕೂಡಾ ಇಂತಹ ಕೆಟ್ಟ ಕೆಲಸಕ್ಕೆ ಕೈಹಾಕುವ ಪ್ರಯತ್ನ ಬೇಡ ಡಂದು ಎಂದು ವೈದ್ಯಾಧಿಕಾರಿ ಡಾ.ಅನುಪಮಾ ಎಸ್.ಕೇಶ್ವಾರ ಹೇಳಿದರು.
ನಗರದ ಶೇಖರೋಜಾದಲ್ಲಿರುವ ಶಹಾಬಜಾರ ‘ನಗರ ಪ್ರಾಥಮಿಕ ಆರೋಗ್ಯ ಕೇಂದ’್ರದ ‘ಬಸವೇಶ್ವರ ಸಮಾಜ ಸೇವಾ ಬಳಗ’ದ ವತಿಯಿಂದ ಮಂಗಳವಾರ ಜರುಗಿದ ‘ಅಂತಾರಾಷ್ಟ್ರೀಯ ಭ್ರೂಣಹತ್ಯೆ ವಿರೋಧಿ ದಿನಾಚರಣೆ’ಯ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು.
ಕಾರ್ಯಕ್ರಮದಲ್ಲಿ ಬಳಗದ ಅಧ್ಯಕ್ಷ ಹಾಗೂ ಉಪನ್ಯಾಸಕ ಎಚ್.ಬಿ.ಪಾಟೀಲ, ಸಮಾಜ ಸೇವಕರಾದ ಶಿವಯೋಗೆಪ್ಪಾ ಎಸ್.ಬಿರಾದಾರ, ಅಸ್ಲಾಂ ಶೇಖ್, ಆರೋಗ್ಯ ಕೇಂದ್ರದ ಸಿಬ್ಬಂದಿಗಳಾದ ಜಗನ್ನಾಥ ಗುತ್ತೇದಾರ, ಗುರುರಾಜ ಕೈನೂರ, ಗಂಗಾಜ್ಯೋತಿ ಗಂಜಿ, ರೇಷ್ಮಾ ನಕ್ಕುಂದಿ, ಸಂಗಮ್ಮ ಅತನೂರ್, ಮಂಗಲಾ ಚಂದಾಪುರೆ, ಶ್ರೀದೇವಿ ಸಾಗರ, ನಾಗಮ್ಮ ಚಿಂಚೋಳಿ, ಕಿರಣ, ಸಿದ್ರಾಮ ಸೇರಿದಂತೆ ಮತ್ತಿತರರಿದ್ದರು.