ಕಲಬುರಗಿ: ಚಿತ್ತಾಪುರ ತಾಲೂಕಿನ ಕೋಲಿ ಸಮಾಜದ ಯುವ ನಗರಾಧ್ಯಕ್ಷ ರಾಜು ಹೋಳಿಕಟ್ಟಿ ಅವರ ನೇತೃತ್ವದಲ್ಲಿ ಯುವ ಮುಖಂಡರು ಬಿಜೆಪಿ ಪಕ್ಷವನ್ನು ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ಇದೇ ವೆಳೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಅವರು ಕಾಂಗ್ರೆಸ್ ಶಾಲುಗಳನ್ನು ಹಾಕುವ ಮೂಲಕ ಬರಮಾಡಿಕೊಂಡರು.
ಈ ಸಂದರ್ಭದಲ್ಲಿ ಕಲಬುರಗಿ ಲೋಕಸಭಾ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ, ಸಚಿವ ಶರಣಪ್ರಕಾಶ ಪಾಟೀಲ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಜಗದೇವ ಗುತ್ತೇದಾರ ಸೇರಿದಂತೆ ಕಾಂಗ್ರೆಸ್ ಪಕ್ಷದ ಅನೇಕ ಮುಖಂಡರು ಹಾಗೂ ಕಾರ್ಯಕರ್ತರು ಇದ್ದರು.