ಕಲಬುರಗಿ: ಇಲ್ಲಿನ ಪ್ರಸಿದ್ಧ ಸಂತ ಶ್ರೀ ಶರಣಬಸವೇಶ್ವರ ಜಾತ್ರೆಯ ವೇಳೆ ಅನ್ನದಾಸೋಹ ಕಾರ್ಯಾಕ್ರಮದಲ್ಲಿ ಬಿಜೆಪಿ ನಾಯಕರು ಬ್ಯಾನರ್ ಹಾಕಿ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿರುವ ಹಿನ್ನೆಲೆಯಲ್ಲಿ ಬಿಜೆಪಿ ನಗರದ ಅಧ್ಯಕ್ಷ, ವಿಧಾನ ಪರಿಷತ್ ಸದಸ್ಯ ಸೇರಿ ಇತರರ ವಿರುದ್ಧ ಪ್ರಕರಣ ದಾಖಲಾಗಿದೆ.
ನಗರದ ಕಲ್ಯಾಣಿ ಪೆಟ್ರೋಲ್ ಪಂಪ್ ಹತ್ತಿರ ಬಿಜಿ ಪಾಟೀಲ್ ಫೌಂಡೇಷನ್ ವತಿಯಿಂದ ಆಯೋಜಿಸಲಾದ ಅನ್ನದಾಸೋಹ ಕಾರ್ಯಕ್ರಮದಲ್ಲಿ ರಾಜಕೀಯ ವ್ಯಕ್ತಿಗಳ ಭಾವಚಿತ್ರ ಇರುವ ಬ್ಯಾನರ್ ಹಾಕಿರುವ ಹಿನ್ನೆಲೆಯಲ್ಲಿ ಬಿಜೆಪಿ ಪಕ್ಷದ ವಿಧಾನ ಪರಿಷತ್ ಸದಸ್ಯ ಬಿ.ಜಿ ಪಾಟೀಲ್ ಮತ್ತು ಬಿಜೆಪಿ ಪಕ್ಷದ ನಗರ ಅಧ್ಯಕ್ಷರಾದ ಚಂದು ಪಾಟೀಲ್ ವಿರುದ್ಧ ಪ್ರಕರಣ ದಾಖಲಾಗಿದೆ.